ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಇವರ ವತಿಯಿಂದ ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ದಿನಾಚರಣೆ ಕಾರ್ಯಕ್ರಮವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಯ 100ಕ್ಕೂ ಮಿಕ್ಕಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಕುಂದಾಪುರ ಬಿಜೆಪಿ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ ಬಡವರ ಕಣ್ಮಣಿ, ರೈತಾಪಿ ವರ್ಗದ ನಾಯಕರು ಜನಪ್ರಿಯ ಯೋಜನೆಗಳ ಹರಿಕಾರ ಭಾಗ್ಯಲಕ್ಷ್ಮಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್, ಅನೇಕ ಜನಪ್ರಿಯ ಯೋಜನೆಗಳನ್ನು ಜಾರಿತಂದಿರುವ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರ ಹುಟ್ಟು ಹಬ್ಬವನ್ನು ಕುಂದಾಪುರ ಮಂಡಲ ಹಾಗೂ ಸರ್ವ ಮೋರ್ಚಗಳ ನೇತೃತ್ವದಲ್ಲಿ ವಿಶಿಷ್ಟವಾಗಿ ಆಚರಿಸಿ ಅವರ ಜನ್ಮದಿನಾಚರಣೆಗೆ ಶುಭ ಕೋರಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ,ಸುಧೀರ್ ಕೆ.ಎಸ್. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕುಂದಾಪುರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ ಸಂಗಮ್, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಬಿ ಪೈ, ಬಿಜೆಪಿ ಎಸ್. ಸಿ .ಮೋರ್ಚಾದ ಅಧ್ಯಕ್ಷ ಮಂಜುನಾಥ್ ಬಳ್ಕೂರ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಬಿಜೆಪಿ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,, ಕುಂದಾಪುರ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರಭಾಕರ.ವಿ.ಮಾಜಿ ಸದಸ್ಯರಾದ ದಿವಾಕರ ಕಡ್ಗಿ, ರತ್ನಾಕರ ಶೇರಿಗಾರ್, ಕುಂದಾಪುರ ಬಿಜೆಪಿ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
