ಉಡುಪಿ: ಜಿಲ್ಲೆಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಸಾರ್ವಜನಿಕ ವಲಯದಲ್ಲಿ ಭಯ ಹುಟ್ಟಿಸಿದ್ದ ಇಬ್ಬರು ಕುತ್ಯಾತ ಕಳ್ಳರನ್ನು ಪಡುಬಿದ್ರಿ ಪೊಲೀಸ್ ರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯ್ಲ ಗ್ರಾಮದ ಕಲಾಯಿ ಹೌಸ್ ವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಉರ್ಮಿಚಾಲ್ ಬೇಕೂರು ನಿವಾಸಿ ಮಹಮ್ಮದ್ ರಿಯಾಜ್/ ಕಡಪ್ಪ ರಿಯಾಜ್ ಬಂಧಿತ ಕುಖ್ಯಾತ ಕಳ್ಳರು. ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ರು ಈ ಆರೋಪಿಗಳ ಬೆನ್ನು ಹತ್ತಿದ್ದರು.

ಕಳೆದ ತಿಂಗಳು ೨೨ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಬಳಿ ಗಣೇಶ್ ಪ್ರಸಾದ್ ಶೆಟ್ಟಿ ಮನೆಯ ಬಾಗಿಲನ್ನು ಕಳ್ಳರು ಒಡೆದು ಮನೆಯ ಒಳಗೆ ನುಗ್ಗಿ ರೂಪಾಯಿ1,20,000/- ಮತ್ತು ರೂಪಾಯಿ 25,000/- ಮೌಲ್ಯದ ಒಂದು ಹಳೆ ಚಿನ್ನದ ಸರವನ್ನು ಕಳ್ಳತನ ಮಾಡಿ ಹೋಗಿದ್ದರು. ಈ ಕುರಿತು ಗಣೇಶ್ ಪ್ರಸಾದ್ ಶೆಟ್ಟಿಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡು ತಂಡ ರಚಿಸಿ ತನಿಖೆ ಆರಂಭಿಸಿದ ಪೊಲೀಸ್ ರು, ಕಳ್ಳತನದ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಮೊಗ್ರಾಲ್ ಪುತ್ತೂರು ಸಾಸ್ತ ನಗರ ಎಂಬಲ್ಲಿ ವಾಸಮಾಡಿಕೊಂಡಿದ್ದ ಇಬ್ರಾಹಿಂ ಕಲಂದರ್ ಹಾಗೂ ಮಹಮ್ಮದ್ ರಿಯಾಜ್ ನನ್ನು ಬಂಧಿಸಿ ವಿಚಾರಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬಂಧಿತರಿಂದ ಕಳ್ಳತನಕ್ಕೆ ಉಪಯೋಗಿಸಿದ ಟಾಟಾ ಪಂಚ್ ಕಾರನ್ನು ಮತ್ತು ರೂಪಾಯಿ 24,000 ನಗದನ್ನು ವಶಪಡಿಸಿಕೊಳ್ಳಲಾಗಿದ್ದು. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.
ಇಬ್ರಾಹಿಂ ಕಲಂದರ್ ಮೇಲೆ ಈಗಾಗಲೇ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ 2 ದೇವಸ್ಥಾನ ಕಳವು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 1 ಮನೆ ಕಳವು, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 1 ದರೋಡೆಗೆ ಪ್ರಯತ್ನ, ಮೇಲ್ಪರಂಭ ಠಾಣೆಯಲ್ಲಿ ಮನೆ ಕಳವು ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಮುನಿಯಲು ಸೊಸೈಟಿ ದರೋಡೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣ, ಪುತ್ತೂರು ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ 4 ಮನೆ ಕಳವು ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ, ಉಪ್ಪಿನಂಗಡಿ ಠಾಣೆಯಲ್ಲಿ ಅಂಗಡಿ ಕಳವು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಂಗಡಿ ಕಳವು, ಮಡಿಕೇರಿ ಜಿಲ್ಲೆಯ ಕುಶಾಲನಗರ ಠಾಣೆಯಲ್ಲಿ ಕಳುವು ಪ್ರಕರಣ ದಾಖಲಾಗಿದ್ದು 15-02-25 ರಂದು ಕೇರಳ ರಾಜ್ಯದ ಹೊಸದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಹೊಂದಿರುತ್ತಾನೆ. ಇನ್ನೋರ್ವ ಆರೋಪಿ ಮೊಹಮ್ಮದ್ ರಿಯಾಜ್ ಎಂಬಾತನ ಮೇಲೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಪುತ್ತೂರು ನಗರ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದ್ದು, ಈತ ಇತ್ತೀಚೆಗೆ ಕಾಸರಗೋಡು ಸಬ್ ಜೈಲಿನಿಂದ ಬಿಡುಗಡೆಯಾಗಿದ್ದ.