Thursday, March 5, 2026

spot_img

ಕುದುರೆಮುಖ ರಾಷ್ಟ್ರೀಯ ಉದ್ಯಾನ: ವಾಲಿಕುಂಜ–ನರಸಿಂಹ ಪರ್ವತ ಚಾರಣ ಮಾರ್ಗಗಳಿಗೆ ತಾತ್ಕಾಲಿಕ ನಿಷೇಧ

ಉಡುಪಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿರುವ ಜನಪ್ರಿಯ ಚಾರಣ ಮಾರ್ಗಗಳಾದ ವಾಲಿಕುಂಜ ಹಾಗೂ ನರಸಿಂಹಪರ್ವತ ಮಾರ್ಗಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಪ್ರವೇಶ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಆದೇಶ ಪ್ರಕಾರ ನವೆಂಬರ್ 17ರಿಂದ 19ರವರೆಗೆ ಪ್ರವಾಸಿಗರಿಗೆ ಈ ಎರಡೂ ಟ್ರೆಕ್ಕಿಂಗ್ ಮಾರ್ಗಗಳಿಗೆ ಪ್ರವೇಶ ಅವಕಾಶ ಇರುವುದು ಇಲ್ಲ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪತ್ರದಲ್ಲಿ ವಿವರಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಚಲನವಲನ ಹೆಚ್ಚಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಅನಾಹುತ ತಪ್ಪಿಸಲು ತಾತ್ಕಾಲಿಕವಾಗಿ ಚಾರಣ ನಿಲ್ಲಿಸಲಾಗಿದೆ. ಪರಿಸ್ಥಿತಿ ಸಾಮಾನ್ಯಗೊಂಡ ನಂತರ ಮರುಪ್ರವೇಶ ಕುರಿತು ಪ್ರತ್ಯೇಕ ಮಾಹಿತಿ ನೀಡಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles