Thursday, October 23, 2025

spot_img

ಕುಲಕಸುಬುಗಳಿಗೆ ಶಕ್ತಿ ಸಿಗುವ ನಿಟ್ಟಿನಲ್ಲಿ ಈ ಪಿ.ಎಂ ವಿಶ್ವಕರ್ಮ ಯೋಜನೆ: ಶಾಸಕ ಎ.ಕಿರಣ್ ಕೊಡ್ಗಿ

ಬ್ರಹ್ಮಾವರ : ಕುಲಕಸುಬುಗಳಿಗೆ ಶಕ್ತಿ ಸಿಗುವ ನಿಟ್ಟಿನಲ್ಲಿ ಐದು ದಿನಗಳ ಕಾಲ ತರಬೇತಿ ನೀಡಿ ಅವರು ಈಗಿರುವ ಕುಲಕಸುಬುಗಳನ್ನು ಸರಿಯಾಗಿ ಮಾಡಬಹುದೆಂದು ಯೋಚಿಸಿ ಈ ನವೀಕೃತ ಉದ್ಯಮ ಉದ್ಯೋಗವನ್ನು ನವೀಕರಣಗೊಳಿಸಿದ್ದು ವಿಶ್ವಕರ್ಮ ಯೋಜನೆಯ ಅಡಿ ಒಂದು ಲಕ್ಷ ರೂಪಾಯಿ ಸಾಲ ಸೌಲಭ್ಯ ಕಲ್ಪಿಸಲಾಗಿದ್ದು ಈ ವಿಶ್ವಕರ್ಮ ಯೋಜನೆ ಮುಖ್ಯ ಉದ್ದೇಶವಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾರ್ಕೂರ್ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಆಯೋಜಿಸಲಾದ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಮಹತ್ವಂಕಾಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಯೋಜನೆ ಯಶಸ್ವಿಯಾಗಲಿ ಎಂದು ತರಬೇತಿ ಪಡೆದ ಫಲಾನುಭವಿಗಳಿಗೆ ಟೋಲ್ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವಿವಿಧ ವೃತ್ತಿಗಳಲ್ಲಿ ತೊಡಗಿರುವ ಕುಶಲಕರ್ಮಿಗಳನ್ನು ಗುರುತಿಸಿ, ಸದರಿ ವೃತ್ತಿಯನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಸೂಕ್ತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ.ಉತ್ಪಾದಿಸುವ ಉತ್ಪನ್ನಗಳಿಗೆ ಸ್ಥಳೀಯ ಹಾಗೂ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಕ್ಕೆ ಶಕ್ತಿ ಬರಲಿ ಎಂದು ಹದಿನೈದು ಸಾವಿರಗಳ ಮೊತ್ತದ ಟೋಲ್ ಕಿಟ್ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬಾರ್ಕೂರ ಗ್ರಾಮ ಪಂಚಾಯಿತಿನ ಅಧ್ಯಕ್ಷ ಶಾಂತರಾಮ್ ಶೆಟ್ಟಿ, ಗ್ರಾಮ ಪಂಚಾಯಿತಿನ ಪಿಡಿಒ ವಂದನಾ,, ಕುಂದಾಪುರ ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ. ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನ ಕೋಟ ಶ್ರೀನಿವಾಸ್ ಪೂಜಾರಿಯವರ ಆಪ್ತ ಕಾರ್ಯದರ್ಶಿ ಹರೀಶ್ ಶೆಟ್ಟಿ ನಿರ್ವಹಿಸಿದರು. ಬಾರ್ಕೂರು ಗ್ರಾಮ ಪಂಚಾಯಿತಿನ ಸದಸ್ಯರು , ಗ್ರಾಮ ಪಂಚಾಯಿತಿನ ಸಿಬ್ಬಂದಿ ವರ್ಗದವರು, ಫಲಾನುಭವಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles