Wednesday, March 4, 2026

spot_img

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬ್ರಹ್ಮಾವರ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಿಂದ ಅಕ್ಟೋಬರ್ 2025 ರಲ್ಲಿ ನಡೆಯುವ ಕೃಷಿ ಮೇಳಕ್ಕೆ ಪ್ರತಿ ವರ್ಷದಂತೆ ಈ ವರ್ಷವು ಪ್ರಗತಿಪರ ರೈತ/ ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಆ ಪ್ರಯುಕ್ತ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಮಗ್ರ ಕೃಷಿ ಯನ್ನು ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗು ರೈತ ಮಹಿಳೆಯರನ್ನು ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಪ್ರಗತಿಪರ ರೈತ/ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಕೃಷಿ ಮೇಳದಲ್ಲಿ ನಗದು ರೂ.7500/- ಮತ್ತು ಪ್ರಮಾಣಪತ್ರ ಕೊಟ್ಟು ಸನ್ಮಾನಿಸಲಾಗುವುದು. ಅರ್ಜಿದಾರರು ಸ್ವತಃ ರೈತರಾಗಿದ್ದು, ಸ್ವಂತ ಜಮೀನಿನ ಪಹಣಿ ಹೊಂದಿದವರಾಗಿರಬೇಕು ಅರ್ಜಿಯ ಜೊತೆಗೆ ವಿವಿಧ ಕೃಷಿಗಳ ಮಾಹಿತಿಯೊಂದಿಗೆ ಸೂಕ್ತ ಛಾಯ ಚಿತ್ರಗಳು ಮತ್ತು ದಾಖಲೆಗಳನ್ನು ತಪ್ಪದೆ ಲಗತ್ತಿಸ ತಕ್ಕದು ಇಲ್ಲವಾದಲ್ಲಿಅರ್ಜಿಯನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿ ಒದಗಿಸಲು ಅರ್ಜಿ ನಮೂನೆಯಲ್ಲಿ ಸಾಕಾಗದಿದ್ದರೆ ಪ್ರತ್ಯೇಕ ಹಾಳೆಗಳನ್ನು ಲಗತ್ತಿಸಿ ಕೊಡಬಹುದು. ಈ ಹಿಂದೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಯಾವುದೇ ಪ್ರಶಸ್ತಿಯನ್ನು ಪಡೆದಿರಬಾರದು. ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ರಜತಾದ್ರಿ ಮಣಿಪಾಲ, ಉಡುಪಿಯಲ್ಲಿ ಪಡೆದುಕೊಂಡು ದಿನಾಂಕ 30.08.2025 ರ ಒಳಗೆ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ಉಡುಪಿಯ ಕಛೇರಿಗೆ ನೀಡಬೇಕಾಗಿ ಈ ಮೂಲಕ ಕೋರಿದೆ. ಹೆಚ್ಚಿನ ಮಾಹಿಗಾಗಿ ದೂರವಾಣಿ ಸಂಖ್ಯೆ 9480838202 ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, 8277932502 ಜಂಟಿ ಕೃಷಿ ನಿರ್ದೇಶಕರು, ಉಡುಪಿ ಹಾಗೂ ಅರ್ಜಿ ಫಾರಂನ್ನು ವೆಬ್‌ಸೈಟ್ kvkudupi.karnataka.gov.in ಮೂಲಕ ಪಡೆಯಬಹುದು ಎಂದು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles