ಉಡುಪಿ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅ.30ರಂದು ನಡೆದ ಕೃಷಿ ಮತ್ತು ತೋಟಗಾರಿಕೆ ಮೇಳ–2026ರಲ್ಲಿ ಉಡುಪಿ ಜಿಲ್ಲೆಯ ಇಬ್ಬರು ಪ್ರಗತಿಪರ ರೈತರು ಪ್ರಶಸ್ತಿ ಸ್ವೀಕರಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಉಡುಪಿ ಜಿಲ್ಲೆಯ ಪ್ರಗತಿಪರ ರೈತರಾಗಿ ಬೈಲೂರಿನ ಗೌತಮ್ ಶೆಟ್ಟಿ ಹಾಗೂ ಪ್ರಗತಿಪರ ರೈತ ಮಹಿಳೆಯಾಗಿ ಉದ್ಯಾವರದ ಶ್ರೀಮತಿ ವತ್ಸಲ ವಿಜಯ ಕುಮಾರ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇಳದಲ್ಲಿ ನಡೆದ ಸಮಾರಂಭದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಂದ ಇಬ್ಬರೂ ಪ್ರಶಸ್ತಿ ಸ್ವೀಕರಿಸಿದರು. ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಗುರುತಿಸಿ ಗೌರವಿಸುವ ಮೂಲಕ ಇತರ ರೈತರಿಗೂ ಪ್ರೇರಣೆ ನೀಡುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.


