Friday, June 13, 2025

spot_img

ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ : ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಜನರಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರು ಸಹ ಈ ಕಾರ್ಯಗಳಿಗೆ ಸ್ಪಂದಿಸಬೇಕೆಂದು ಸೂಚನೆ ನೀಡಿದರು.

ಕುಡಿಯುವ ನೀರಿನ ಕೆಲವು ಕಾಮಗಾರಿಗಳಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಿ, ಸಮಸ್ಯೆಗಳನ್ನು ಬಗೆಹರಿಸಿ, ಪ್ರಗತಿ ಸಾಧಿಸಬೇಕು, ಕಳಪೆ ಕಾಮಗಾರಿಗಳು ಲೋಪಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು. ಜಿಲ್ಲೆಯ ಕಾಡಂಚಿನಲ್ಲಿ ವಾಸವಿರುವ ಕೊರಗ ಸಮುದಾಯದವರ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅವರುಗಳು ಅರ್ಜಿ ಸಲ್ಲಿಸಲು ಮುಂದೆ ಬರುವುದಿಲ್ಲ. ಜಿಲ್ಲೆಯಲ್ಲಿ 182 ಕ್ಕೂ ಹೆಚ್ಚು ಹಾಡಿಗಳಲ್ಲಿ ಈ ಸಮುದಾಯದವರು ವಾಸವಿದ್ದಾರೆ. ಅವರು ಇರುವಲ್ಲಿಗೆ ಹೋಗಿ ಅವರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಅನ್ನು ನೀಡುವುದರೊಂದಿಗೆ, ಖಾಸಗಿ ಸಂಸ್ಥೆಗಳ ಸಹಕಾರ ಪಡೆದು ಮನೆ ನಿರ್ಮಾಣದ ಕಾಮಗಾರಿಗಳನ್ನು ಪ್ರಗತಿಯನ್ನು ಹೆಚ್ಚಿಸಬೇಕು.

ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಯೋಜನೆಯಡಿ ಕಾಲುಸಂಕ ನಿರ್ಮಿಸಲು ಅವಕಾಶವಿದ್ದು, ಇದರ ಸದುಪಯೋಗ ಪಡಿಸಿಕೊಂಡು ಕರಾವಳಿ ಭಾಗಗಳಲ್ಲಿ ಅಗತ್ಯವಿರುವೆಡೆ ಕಾಲಸಂಕ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1412 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈಗಾಗಲೇ ಕೈಗೊಂಡಿರುವ ಹೆಬ್ರಿ, ಪರ್ಕಳ, ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗೆ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿ, ಪರಿಹಾರ ಹಣವನ್ನು ಸಂತ್ರಸ್ತರಿಗೆ ತ್ವರಿತವಾಗಿ ಪಾವತಿಸಿ, ಕಾಮಗಾರಿಯ ವೇಗ ಹೆಚ್ಚಿಸಬೇಕು. ಜಿಲ್ಲೆಯಲ್ಲಿ ಕೈಗೊಂಡಿರುವ ಹೆಜಮಾಡಿ ಬಂದರು ಕಾಮಗಾರಿ, ಹಂಗಾರಕಟ್ಟೆ, ಗಂಗೊಳ್ಳಿ ಹಾಗೂ ಮರವಂತೆಯಲ್ಲಿ ಕೋಸ್ಟಲ್ ಬರ್ತ್ ಅಭಿವೃದ್ಧಿ ಕಾಮಗಾರಿಗಳು ಹಾಗೂ ಹೊರಬಂದರು ವಿಸ್ತರಣಾ ಜನೆಗಳಕಾಮಗಾರಿಗಳನ್ನು ಚುರುಕುಗೊಳಿಸಬೇಕು.


ಕೋಟ ಶ್ರೀನಿವಾಸ ಪೂಜಾರಿ(ಸಂಸದರು)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles