Wednesday, October 22, 2025

spot_img

ಕೇರಳ ಸಮಾಜಂ ಉಡುಪಿ ಇದರ ವತಿಯಿಂದ ತಮ್ಮ ಪ್ರಥಮ ಒಣಂ ಸಂಭ್ರಮಾಚರಣೆ

ಉಡುಪಿ: ಕೇರಳ ಸಮಾಜಂ ಉಡುಪಿ ಇದರ ವತಿಯಿಂದ ತಮ್ಮ ಪ್ರಥಮ ಒಣಂ ಸಂಭ್ರಮಾಚರಣೆ ಭಾನುವಾರ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಭಾವನದಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನ್ಯಾಯಾಧೀಶರಾದ ಕಿರಣ್ ಎಸ್ ಗಂಗಣ್ಣನವರ ಉದ್ಘಾಟಿಸಿ,  ಮಾತನಾಡಿ ಕೇರಳಿಯರು ಇಂದು ತಮ್ಮ ಕಲೆ ಮತ್ತು ಸಂಸ್ಕೃತಿಯಿಂದಾಗಿ ಪ್ರತಿ ಪ್ರದೇಶದಲ್ಲಿ ಮನೆಮಾತಾಗಿದ್ದಾರೆ. ಅವರ ಶೈಕ್ಷಣಿಕ ಪರಿಶ್ರಮದ ಫಲವಾಗಿ ಇಂದು ದೇಶದ ಅತ್ಯುನ್ನತ ಸರಕಾರಿ ಹುದ್ದೆಗಳನ್ನು ಸಹ ಪಡೆಯುವಲ್ಲಿ ಶಕ್ತರಾಗಿದ್ದಾರೆ. ಓಣಂ ಹಬ್ಬ ಪ್ರತಿಯೊಬ್ಬರನ್ನು ಒಗ್ಗೂಡಿಸುವ ಹಬ್ಬವಾಗಿದ್ದು ಕೇರಳದ ವಿಶಾಲವಾದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಶುಭ ಹಾರೈಸಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇರಳ ಸಮಾಜಂ ಉಡುಪಿ ಇದರ ಅಧ್ಯಕ್ಷರಾದ ಅರುಣ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಕೇರಳಿಯರು ತಮ್ಮ ಶ್ರದ್ಧೆ ಮತ್ತು ಪರಿಶ್ರಮದಿಂದಾಗಿ ವಿಶ್ವದೆಲ್ಲಡೆ ತಮ್ಮ ಛಾಪನ್ನು ಮೂಡಿಸಿದ್ದಾರೆ. ನಮ್ಮ ನೆರೆಯ ಕೇರಳ ರಾಜ್ಯ ಮತ್ತು ಕರಾವಳಿಜಿಲ್ಲೆಗೆ ಅವಿನಾಭಾವ ಸಂಬಂಧವಿದ್ದು ಹೆಚ್ಚಿನ ಸಂಖ್ಯೆಯ ಕೇರಳಿಯರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ನೆಲೆ ನಿಂತು ಇಲ್ಲಿನ ಆರ್ಥಿಕ, ಸಾಮಾಜಿಕ ಪ್ರಗತಿಗೆ ತಮ್ಮ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ 2025 ನೇ ಸಾಲಿನ ಜಿಲ್ಲಾ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿ ಪಡೆದ ಸರಸ್ವತಿ ಟೀಚರ್, ದ್ವಿತೀಯ ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ 9ನೇ ರಾಂಕ್  ಪಡೆದ ಬಿಬಿನ್ ಬಿಜೋಯ್ , ಗಾಯನದಲ್ಲಿ ವಿಶೇಷ ಸಾಧನೆ ತೋರಿದ ವಿಷ್ಣು ನಂಬಿಯಾರ್ ಅವರನ್ನು ಗೌರವಿಸಲಾಯಿತು.

ಹತ್ತನೇ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ, ಪೂಕಳಂ ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಗೋವಾ ರಾಜ್ಯದ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರ ಶುಭಾಂಶನಾ ನುಡಿಯನ್ನು ವೀಡಿಯೋ ಮೂಲಕ ಪ್ರದರ್ಶಿಸಲಾಯಿತು. ಮಾಹೆ ಸಂಸ್ಥೆಯ ಪ್ರೊಫೇಸರ್ ಡಾ. ಸಾಬೂ ಕೆಎಂ ಸುವರ್ಣ, ಖ್ಯಾತ ಸಿನೇಮಾ ತಾರೆಯರಾದ ವಿವೇಕ್ ಗೋಪನ್, ಸೀಮಾ ಜಿ ನಾಯರ್, ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಆಚರಣಾ ಸಮಿತಿಯ ಸಂಚಾಲಕಿ ಪ್ರೋ. ಡಾ. ಬಿನ್ಸಿಂ ಎಂ ಜಾರ್ಜ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಕ್ಯಾಲಿಕಟ್ ನ ವಿನೋದ್ ಕುಮಾರ್ ಮತ್ತವರ ತಂಡ ತಯಾರಿಸಿದ ಓಣಂ ಸದ್ಯವನ್ನು ಸವಿದರು. ಭೋಜನದ ಬಳಿಕ ಕೇರಳದ ಸಿನೆಮಾ ಕಲಾವಿದರ ತಂಡದಿಂದ ವೈವಿಧ್ಯಮಯ ಸಂಗೀತ, ನೃತ್ಯ, ಮಿಮಿಕ್ರಿ, ಹಾಸ್ಯಭರಿತ ಮನೋರಂಜನಾ ಕಾರ್ಯಕ್ರಮಗಳು ನಡೆದವು. ಸಂಜೆ ಜಯಕೇರಳ ಕಳರಿ ಸಂಘಮ್ ತಂಡದಿಂದ ಕಳರಿ ಪ್ರದರ್ಶನ, ವಿಶೇಷವಾಗಿ ಹುಲಿವೇಷ ತಂಡದಿಂದ ಹುಲಿ ವೇಷ ಕುಣಿತ ಕೂಡ ನಡೆಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles