Thursday, April 23, 2026

spot_img

ಕೊಡವೂರು ಮಹಾ ರುದ್ರಯಾಗ ಮಾಹಿತಿ ಕಚೇರಿ ಉದ್ಘಾಟನೆ

ಉಡುಪಿ: ಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಮೇ 14ರಿಂದ 20ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಅಂಗವಾಗಿ ಮಾಹಿತಿ ಕಚೇರಿಯನ್ನು ಉದ್ಘಾಟಿಸಲಾಯಿತು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೆರೂರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಮಹಾ ರುದ್ರಯಾಗದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪುಣ್ಯಫಲ ಪಡೆಯಬೇಕು. ಈ ಯಾಗದ ಮೂಲಕ ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕೊಡವೂರು, ಮಹಾ ರುದ್ರಯಾಗದ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಸಂಚಾಲಕ ಡಾ. ವಿಜೆಯೇಂದ್ರ ವಸಂತ್, ಶಂಕರನಾರಾಯಣ ಭಕ್ತವೃಂದ ಅಧ್ಯಕ್ಷ ತೋಟದಮನೆ ದಿವಾಕರ ಶೆಟ್ಟಿ, ಸುಕನ್ಯಾ ಪೂಜಾರಿ, ರಮೇಶ್ ತಿಂಗಳಾಯ, ನಂದಕಿಶೋರ್, ಸೀತಾರಾಮ ಆಚಾರ್ಯ, ವಾದಿರಾಜ್ ಸಾಲ್ಯಾನ್, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಕೊಡವೂರು ಹಾಗೂ ದೇವಳದ ಉಮೇಶ್ ರಾವ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles