ಕೊಲ್ಲೂರು : ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ಧತೆಯನ್ನು ಮಕ್ಕಳಿಗೆ ತಿಳಿಸಿ ಹಾಗೂ ಕಿಠಿಣ ಪರಿಶ್ರಮ, ಬದ್ಧತೆ ಮತ್ತು ಆತ್ಮ ವಿಶ್ವಾಸದಿಂದ ಯಾವುದೇ ಅಸಾಧ್ಯವನ್ನು ಸಾಧಿಸಿ ತೋರಿಸಬಹುದು ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕೊಲ್ಲೂರು ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಕಾಲೇಜು ಬಾಲಕ – ಬಾಲಕಿಯರ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಸದೃಢ ಮನಸ್ಸು ಏಕಾಗ್ರತೆಯಿಂದ ನೆಟ್ ಬಾಲ್ ಪಂದ್ಯಾಟವನ್ನು ಜಯಿಸಬಹುದೆಂದು, ಕ್ರೀಡಾ ಕ್ಷೇತ್ರ ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡಿ ಬೆಳೆಯಲು ಅವಕಾಶ ನೀಡುತ್ತದೆ ಎಂದು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಸುರೇಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕಾಲೇಜಿನ ಸಂಚಾಲಕ ಪ್ರಶಾಂತ್ ಕುಮಾರ್ ಶೆಟ್ಟಿ , ಅತಿಥಿಗಳಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹಾಲಿಂಗ ನಾಯ್ಕ, ಸುಧಾ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಸನ್ನ ಶರ್ಮಾ ಮತ್ತು ವಿಶೇಷ ಆಮಂತ್ರಣ ವೀಕ್ಷಕರಾದ ಕೃಷ್ಣ ಮೊಗವೀರ, ಉಡುಪಿ ಜಿಲ್ಲಾ ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ ಹುಂಚಿನಿ , ಉಡುಪಿ ಜಿಲ್ಲಾ ಅಮೆಚೂರ್ ನೆಟ್ ಬಾಲ್ ಅಸೋಸಿಯೇಷನ್ ಖಜಾಂಚಿ ಅವಿನಾಶ ಆಚಾರ್ಯ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಸಂಗೀತಾ ಶೆಟ್ಟಿ ನಿರೂಪಿಸಿದರು. ಗಣಕ ವಿಜ್ಞಾನ ಉಪನ್ಯಾಸಕ ರಾಮ ನಾಯ್ಕ ಕೆ.ಬಿ ವಂದಿಸಿದರು.