ಕೊಲ್ಲೂರು : ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು ಸಂಯಮ ನಾಯಕತ್ವ ಗುಣ ಸೇವಾಮನೋಭಾವನೆಯೊಂಗೆ ಸಮಾಜದಲ್ಲಿ ಬೆರೆಯುವ ಗುಣಗಳನ್ನು ಬೆಳೆಸಿ ವಿಧ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಗೆ ಕಾರಣ ಆಗುತ್ತದೆ. ಆದರಿಂದ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಇಂತಹ ಶಿಬಿರದಲ್ಲಿ ಭಾಗವಹಿಸಿ ದೇಶ ಸೇವೆ ಮಾಡಬೇಕು ಎಂದು ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಚುಚ್ಚಿ ನಾರಾಯಣ ಶೆಟ್ಟಿ ಹೇಳಿದರು.

ಅವರು ಆರೆಶಿರೂರುನಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಆಯೋಜಿಸಲಾದ, ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಮಾಡಿ ತಮ್ಮನ್ನು ಸಮಾಜ ಮತ್ತು ದೇಶ ಸೇವೆಗೆ ಸದಾ ತೊಡಗಿಸಿಕೊಳ್ಳಬೇಕು ಶಿಬಿರದ ಸಂಪೂರ್ಣ ಸದುಪಯೋಗ ಮಾಡಿಕೊಳ್ಳಬೇಕು ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಜನ್ಮನೆ ನಿವೃತ್ತ ಮುಖ್ಯೋಪಾಧ್ಯಾಯರಾದ ರತ್ನಾಕರ್ ಶೆಟ್ಟಿ, ಆರೆಶಿರೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮುಖ್ಯೋಪಾಧ್ಯಾಯ ದಿನಕರ ನಾಯ್ಕ್, ಗೋಳಿಹೊಳೆ ಗ್ರಾಮ ಪಂಚಾಯತ್ ಸದಸ್ಯ ನಿತಿನ್ ಕುಮಾರ್ ಶೆಟ್ಟಿ ಹಾಗೂ ಕಾಲೇಜಿನ ಘಟಕದ ನಾಯಕ ರುತ್ವಿಕ್ ಹಾಗೂ ನಾಯಕಿ ತನುಶ್ರೀ ಉಪಸ್ಥಿತರಿದ್ದರು. ಕೊಲ್ಲೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ ಸ್ವಾಗತಿಸಿದರು. ಶಿಬಿರದ ಯೋಜನಾಧಿಕಾರಿ ಕಾಲೇಜಿನ ಉಪನ್ಯಾಸಕ ನಾಗರಾಜ ಅಡಿಗ ಪ್ರಾಸ್ತಾವಿಕ ಮಾತನಾಡಿದರು. ಸಹ ಶಿಬಿರಾಧಿಕಾರಿ ಕಾಲೇಜಿನ ಉಪನ್ಯಾಸಕಿ ಜ್ಯೋತಿ ಶೆಟ್ಟಿ ನಿರೂಪಿಸಿದರು. ಸಹ ಶಿಬಿರಾಧಿಕಾರಿ ಕಾಲೇಜಿನ ಉಪನ್ಯಾಸಕ ರಾಮ ನಾಯ್ಕ ಕೆ.ಬಿ ವಂದಿಸಿದರು.