ಕುಂದಾಪುರ : ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ಚಾತುರ್ಮಾಸದ ಅಂಗವಾಗಿ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಪಟ್ಟಾದಿ ರಾಮಚಂದ್ರ ದೇವಸ್ತಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಬಳಿಕ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದವನ್ನು ಪಡೆರು ಸ್ವಾಮೀಜಿಯವರು ಫಲ ಮಂತ್ರಾಕ್ಷತೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್. ಮಂಡಲ ನಿಕಟ ಪೂರ್ವ ಉಪಾಧ್ಯಕ್ಷರಾದ ರಾಜೇಶ್ ಉಡುಪ, ಮಂಡಲ ಉಪಾಧ್ಯಕ್ಷೆ ಶ್ರೀಮತಿ ರೂಪಾ ಬಾಬು ಪೈ. ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಭಕ್ತಾದಿಗಳು ಉಪಸ್ಥಿತರಿದ್ದರು.



