Monday, September 14, 2026

spot_img

ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಮಾಂಗಲ್ಯ ಸರ ಕಳವು: ಖತರ್ನಾಕ್ ಕಳ್ಳಿಯರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ : ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರ ಜನಜಂಗುಳಿಯನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳಿಯರು ಮಹಿಳೆಯೊಬ್ಬರ ಮಾಂಗಲ್ಯ ಸರ ಎಗರಿಸಿರುವ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ವ್ಯಾಪ್ತಿಯ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಅಮೃತೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕಾಗಿ ಆಗಮಿಸಿದ್ದರು. ಈ ಸಂದರ್ಭ ದೇವಳದ ಗರ್ಭಗುಡಿ ಸಮೀಪ ತೀರ್ಥ ಸ್ವೀಕರಿಸುತ್ತಿದ್ದ ಭಕ್ತೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಳ್ಳತನದ ಕೃತ್ಯ ದೇವಸ್ಥಾನದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೂವರು ಮಹಿಳೆಯರು ಕಳ್ಳತನದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಜನಸಂದಣಿಯ ನಡುವೆ ಮಹಿಳೆಯರನ್ನು ಹಿಂಬಾಲಿಸಿ, ಅವಕಾಶ ನೋಡಿಕೊಂಡು ಮಾಂಗಲ್ಯ ಸರ ಎಗರಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles