Friday, November 6, 2026

spot_img

ಕೋಟ-ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

ಉಡುಪಿ: ಮಾದಕ ದ್ರವ್ಯಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೋಟ-ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 3ರಂದು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ , ಯೂತ್ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯಗಳನ್ನು ತ್ಯಜಿಸಿ, ಜೀವನವನ್ನು ಆಯ್ಕೆಮಾಡಿ – ತಿಳುವಳಿಕೆಯುಳ್ಳ ನಿರ್ಧಾರಗಳನ್ನು ಕೈಗೊಳ್ಳಿ ಎಂಬ ವಿಷಯದಡಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೋಟ ಆರೋಗ್ಯ ಸಮುದಾಯ ಕೇಂದ್ರದ ಮಕ್ಕಳ ತಜ್ಞ ವೈದ್ಯರು ಹಾಗೂ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಕೆ. ಅವರು ನೈಜ ಘಟನೆಗಳ ಉದಾಹರಣೆಗಳ ಮೂಲಕ ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅವುಗಳಿಂದ ದೂರವಿರುವುದರ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಬಗ್ಗೆ ಜಾಗೃತರಾಗಿದ್ದು, ತಮ್ಮ ಜೀವನದಲ್ಲಿ ಉತ್ತಮ ಹಾಗೂ ಜವಾಬ್ದಾರಿಯುತ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಸಂತೋಷ್ ನಾಯ್ಕ್ ಎಚ್., ಯೂತ್ ರೆಡ್ ಕ್ರಾಸ್ ಘಟಕದ ಅಧಿಕಾರಿ ರಾಮಚಂದ್ರ ಭಟ್, ವಿದ್ಯಾರ್ಥಿ ಪ್ರತಿನಿಧಿ ಮಿಸ್ರಿಯಾ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಗಗನ್ ಉಪಸ್ಥಿತರಿದ್ದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸ್ನೇಹಾ ಸ್ವಾಗತಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಆಪೇಕ್ಷಾ ವಂದಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles