ಉಡುಪಿ : ಉಡುಪಿ ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯನ್ನು ಉಡುಪಿ ಲೋಕಾಯುಕ್ತ ಪೊಲೀಸ್ ರು ಬಂಧಿಸಿದ ಘಟನೆ ನಡೆದಿದೆ. ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ.ನಾಯ್ಕ ಲಂಚ ಸ್ವೀಕರಿಸಿದ ಆರೋಪದಡಿ ಬಂಧನಕ್ಕೆ ಒಳಗಾದ ಅಧಿಕಾರಿ.

ಮರಳು ವಾಹನದ ಬಿಡುಗಡೆಗೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗಣಪತಿ ನಾಯ್ಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೈ ನಾಗೇಶ್ ಉಡುಪ, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ, ರಾಘವೇಂದ್ರ ಹೊಸಕೋಟೆ, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು