Wednesday, March 26, 2025

spot_img

ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

ಉಡುಪಿ : ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ
ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಹೇಳಿದರು.
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್-ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರ 2030 ರ ಒಳಗೆ ಕ್ಷಯ ಮುಕ್ತ ಭಾರತವನ್ನಾಗಿಸುವ ಆಂದೋಲನವನ್ನು ಹಮ್ಮಿಕೊಂಡಿದೆ. ಜಿಲ್ಲೆಯನ್ನೂ ಸಹ ಕ್ಷಯ ಮುಕ್ತವನ್ನಾಗಿಸಬೇಕು. ಕ್ಷಯರೋಗಿಗಳನ್ನು ಮುಂಚಿತವಾಗಿ ಪತ್ತೆ ಹಚ್ಚುವುದು, ಸಂಪೂರ್ಣ ಚಿಕಿತ್ಸೆಯನ್ನು ನೀಡುವುದು ಹಾಗೂ ರೋಗವು ಇತರರಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷಯ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ರೋಗವನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ನೂರು ದಿನಗಳ ಕ್ಷಯರೋಗ ಅಭಿಯಾನದಲ್ಲಿ ಕ್ಷಯರೋಗಿಗಳನ್ನು ಗುರುತಿಸಿ, ಅವರುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಮೌಲ್ಯಮಾಪನ ಮಾಡಲಾಗುವುದು ಎಂದರು.
ಜನರ ಆರೋಗ್ಯವನ್ನು ಕಾಪಾಡಲು ಪಂಚಾಯತ್ ಮಟ್ಟದಿಂದಲೇ ಅಧಿಕಾರಿಗಳು ಸಮಾರೋಪಾದಿಯಲ್ಲಿ ಕೆಲಸ ಮಾಡಬೇಕು. ಗ್ರಾಮಸಭೆಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಎಂದ ಅವರು, ಸಾಂಕ್ರಾಮಿಕ ರೋಗಗಳನ್ನು ಕೊನೆಗಾಣಿಸುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊAದಿಗೆ ಆಶಾ ಕಾರ್ಯಕರ್ತೆಯರೂ ಸಹ ಸಹಕಾರ ನೀಡಬೇಕು ಎಂದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿ, 2015 ಕ್ಕೆ ಹೋಲಿಸಿದ್ದಲ್ಲಿ ಜಿಲ್ಲೆಯಲ್ಲಿ 2022 ರಲ್ಲಿ ಶೇ.40-60 ರಷ್ಟು ಟಿ.ಬಿ ಪ್ರಕರಣಗಳನ್ನು ಕಡಿಮೆ ಮಾಡುವುದರೊಂದಿಗೆ, ರಾಷ್ಟ್ರಮಟ್ಟದಲ್ಲಿ ಬೆಳ್ಳಿಯ ಪದಕವನ್ನು ಉಡುಪಿ ಜಿಲ್ಲೆಯು ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಶೇ. 9 ರಷ್ಟು ಟಿ.ಬಿ ಪ್ರಕರಣಗಳನ್ನು ಸಹ ಕಡಿಮೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಪಿ.ಡಿ.ಓ.ಗಳು, ತಾಲೂಕು ವೈದ್ಯಾಧಿಕಾರಿಗಳು, ಇಲಾಖೆಯ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಆಲಂದೂರು ಮಂಜುನಾಥ ಎಸ್ ಗಾಣಿಗ ಸ್ವಾಗತಿಸಿ, ನಿರೂಪಿಸಿದರೆ, ಸಂದೀಪ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles