Thursday, October 23, 2025

spot_img

ಕ್ಷಯ ರೋಗಿಗಳಿಗೆ ಉಚಿತ ಆಹಾರದ ಕಿಟ್ ವಿತರಣೆ

ಉಡುಪಿ : ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಎಂ.ಸಿ.ಕೆ.ಎಸ್-ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 17 ಬಡ ಕ್ಷಯ ರೋಗಿಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಹಾಗೂ ಸಿರಿಧಾನ್ಯ ಸೇರಿದಂತೆ ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಆಹಾರದ ಕಿಟ್ ಗಳನ್ನು ಉಚಿತವಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ್, ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುವುದರಿಂದ ಬಡ ರೋಗಿಗಳಿಗೆ ಸಹಾಯವಾಗುವ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬಿದಂತಾಗುತ್ತದೆ.

ಈ ಕಾರ್ಯದಿಂದ ಇತರರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಕೇವಲ ಸರಕಾರ ಮಾತ್ರವಲ್ಲದೆ ಸಂಘ ಸಂಸ್ಥೆಗಳೂ ಈ ಕಾರ್ಯದಲ್ಲಿ ಸಹಕಾರ ನೀಡಿದಲ್ಲಿ ಕ್ಷಯ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್., ಎಂ.ಸಿ.ಕೆ.ಎಸ್ ಮುಖ್ಯಸ್ಥೆ ನಿಧಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles