Monday, June 30, 2025

spot_img

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ…

ಕೋಟ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ(16) ಆತ್ಮಹತ್ಯೆಗೆ ಶರಣಾದವಳು.
ನಿನ್ನೆ ಗುರುವಾರ ದಿಶಾ ಮೊಬೈಲ್‌ ನೋಡಿಕೊಂಡು ಕುಳಿತಿದ್ದ ಹಿನ್ನೆಲೆ, ತಾಯಿ ಗದರಿಸಿ ಮೊಬೈಲ್ ತೆಗೆದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ದಿಶಾ ಕೋಣೆಯ ಬಾಗಿಲು ಹಾಕಿಕೊಂಡಿದ್ದಾಳೆ, ತಾಯಿ ಬಾಗಿಲು ತೆರೆಯಲು ಹೇಳಿದರು, ಬಾಗಿಲು ತೆರೆಯದೆ ಇರುವುದನ್ನು ಕಂಡು ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ತಕ್ಷಣ ಆಸ್ಪತ್ರೆ ಬಾಲಕಿಯನ್ನು ಕರೆದೊಯ್ಯಿದು ರಕ್ಷಣೆಗೆ ಪ್ರಯತ್ನಿಸಲಾಗಿದ್ದು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ.
ದಿಶಾ ಸ್ಥಳೀಯ ಕೋಟ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಸ್ಥಳಕ್ಕೆ ಕೋಟ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles