Thursday, March 5, 2026

spot_img

ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರಸಾವು

ಉಡುಪಿ: ಉಡುಪಿ ರಾಷ್ಟ್ರೀಯ ಹೆದ್ದಾರಿ ೬೬ ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸುಬ್ರಹ್ಮಣ್ಯ ನಗರದ ನಿವಾಸಿ ರವಿ ಪೂಜಾರಿ (44) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿತ್ತು, ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಉಡುಪಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೈಕ್‌ ಚಾಲಕನು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್‌ ರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles