Saturday, May 3, 2025

spot_img

ಗಾಂಜಾ ಮಾರಾಟಕ್ಕೆ ಯತ್ನ, ಆರೋಪಿ ಬಂಧನ

ಉಡುಪಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ಗುಲ್ಟಾರ್ ಸ್ಟ್ರೀಟ್ ನಿವಾಸಿ ಆರೀಬ್ ಅಹಮ್ಮದ್(31) ಬಂಧಿತ ಆರೋಪಿ.

ಈತ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್-2, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles