Saturday, August 8, 2026

spot_img

ಗೃಹಬಳಕೆ ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯ

ಉಡುಪಿ : ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಂದ ಸರಬರಾಜಾಗುತ್ತಿರುವ ಗೃಹಬಳಕೆ ಎಲ್‌ಪಿಜಿ ಅನಿಲ ಪಡೆಯುತ್ತಿರುವ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ.

ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಗ್ರಾಹಕರು ಆಗಸ್ಟ್ 15ರೊಳಗೆ ತಾವು ಗೃಹಬಳಕೆ ಎಲ್‌ಪಿಜಿ ಅನಿಲ ಪಡೆಯುತ್ತಿರುವ ಗ್ಯಾಸ್ ಏಜೆನ್ಸಿಯ ಕಚೇರಿಗೆ ತೆರಳಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಇಲಾಖೆ ಸೂಚಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles