ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ವಿದ್ಯಾನಗರ ದುರ್ಗಾ ಸಭಾಭವನದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಪಂಚಾಯತ್ ನಿಧಿಯಿಂದ ಶಿಕ್ಷಣ, ಅಂಗವಿಕಲ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಸವಲತ್ತು ವಿತರಣೆ ಮಾಡಿ ಕಂದಾಯ ಇಲಾಖೆಯಿಂದ ಮಂಜೂರಾದ ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರ ಮಂಜೂರಾಗಿ ಆದೇಶ ಪತ್ರಗಳನ್ನು ವಿತರಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸುಕನ್ಯ ಸಮೃದ್ಧಿ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಮಾಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವಿತಾ, ಉಪಾಧ್ಯಕ್ಷರಾದ ಮೋಹಿನಿ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಮುದರಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮುತ್ತು, ಗ್ರಾಮ ಆಡಳಿತಾಧಿಕಾರಿಗಳಾದ ಜಗದೀಶ್ ಮುದರಂಗಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
