Saturday, June 28, 2025

spot_img

ಗ್ರಾಮ ಆಡಳಿತಾಧಿಕಾರಿಗಳ ಮನವಿ ಸ್ವೀಕರಿಸಿ ಶಾಸಕರು..

ಕಾಪು : ಕಾಪು ತಾಲೂಕು ಆಡಳಿತ ಸೌಧದ ಬಳಿ ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸೇವಾ ಸೌಲಭ್ಯಗಳನ್ನು ಒದಗಿಸಲು ಸಂಭಂದಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಗ್ರಾಮ ಆಡಳಿತಾಧಿಕಾರಿಗಳ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ. ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಗಳ ಬಳಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ತೆರಳಿ ವಿವಿಧ ಬೇಡಿಕೆಗಳ ಮನವಿಯನ್ನು ಸ್ವೀಕರಿಸಿದರು.

ಮನವಿ ಸ್ವೀಕರಿಸಿದ ಶಾಸಕರು ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಬಗ್ಗೆ ಸರಕಾರದ ಗಮನಕ್ಕೆ ತಂದು ಪ್ರಸ್ತಾಪಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಂದಾಯ ನಿರೀಕ್ಷಕರಾದ ಶಬೀರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles