Tuesday, May 13, 2025

spot_img

ಗ್ರಾಮ ಪಂಚಾಯತ್ ಉಪ ಚುನಾವಣೆ : ವೇಳಾಪಟ್ಟಿ ಪ್ರಕಟ

ಉಡುಪಿ : ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ 01 ಸದಸ್ಯ ಸ್ಥಾನಗಳೂ ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಎ ಮತ್ತು 308 ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಏ. 29 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 11 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮೇ 14 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿAದ ಮತಗಳ ಎಣಿಕಾ ಕಾರ್ಯಗಳು ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22 ರಿಂದ ಮೇ 14 ರ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ
ಚುನಾವಣಾ ಆಯೋಗದ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles