Monday, March 2, 2026

spot_img

ಚಲಾಯಿಸುವ ವೇಳೆ ಸ್ಕೂಟರ್‌ಗೆ ಬೆಂಕಿ, ಸವಾರ ಅಪಾಯದಿಂದ ಪಾರು..

ಉಡುಪಿ: ಬೈಂದೂರು ತಾಲೂಕಿನ ಅರೆಶಿರೂರು ಗ್ರಾಮದಲ್ಲಿ ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.

ಸ್ಕೂಟರ್‌ ಚಲಾಯಿಸುತ್ತಿದ್ದ ರೇಖಾ ಪೂಜಾರಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚರಿಕೆ ವಹಿಸಿ ಸ್ಕೂಟರ್‌ನಿಂದ ಇಳಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ.

ತಾಂತ್ರಿಕ ದೋಷದಿಂದ ಸ್ಕೂಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ. ಮಾಹಿತಿ ಪಡೆದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles