Sunday, September 27, 2026

spot_img

ಚೆಸ್ ಪಂದ್ಯಕೂಟಕ್ಕೆ ಶಾಸಕ ಕಿರಣ್ ಕೊಡ್ಗಿ ಭೇಟಿ

ಉಡುಪಿ : ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದಲ್ಲಿ ಆಯೋಜಿಸಿದ್ದ ಚೆಸ್ ಪಂದ್ಯಕೂಟಕ್ಕೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರೊಂದಿಗೆ ಚೆಸ್ ಆಡುವ ಮೂಲಕ ಪಂದ್ಯಕೂಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಚೆಸ್‌ನಂತಹ ಬೌದ್ಧಿಕ ಕ್ರೀಡೆಗಳು ಯುವಜನರಲ್ಲಿ ಏಕಾಗ್ರತೆ, ತಾರ್ಕಿಕ ಚಿಂತನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ. ಯುವಜನರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಇಂತಹ ಕ್ರೀಡಾ ಚಟುವಟಿಕೆಗಳಿಗೆ ತಮ್ಮ ಬೆಂಬಲ ಸದಾ ಇರಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles