ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ.ಕೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ರಾಷ್ಟ್ರಮಟ್ಟದ ಸ್ಪರ್ಧೆಗೆ ಶುಭಾಶಯ ಕೋರಿದ್ದಾರೆ.



