Sunday, March 8, 2026

spot_img

ಜಲ ಜೀವನ್ ಮಿಷನ್ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾಲಾಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಸಂಜೆ ಜಲ ಜೀವನ್ ಮಿಷನ್ ಯೋಜನೆ ಹಾಗೂ ಉಡುಪಿ ಕುಡಿಯುವ ನೀರು ಯೋಜನೆಯ ಕಾಮಗಾರಿಗಳ ಕುರಿತು ಸಭೆ ನಡೆಯಿತು.

ಸಭೆಯಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳು ಹಾಗೂ ಸ್ಥಳೀಯ ಸಂತ್ರಸ್ತರೊಂದಿಗೆ ಯೋಜನೆಯ ಪ್ರಗತಿ, ಕಾಮಗಾರಿಗಳ ಸ್ಥಿತಿ ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.

 ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಾರಿಗೊಂಡಿರುವ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ವೇಗವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸ್ಥಳೀಯರು ತಮ್ಮ ಸಮಸ್ಯೆಗಳು ಮತ್ತು ಅಸಮಾಧಾನಗಳನ್ನು ಶಾಸಕರ ಮುಂದೆ ಮಂಡಿಸಿದರು. ಅವುಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚನೆ ನೀಡಿದರು. ಯೋಜನೆಯ ಸಮರ್ಪಕ ಜಾರಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ನಿಯಮಿತವಾಗಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles