ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದ ವಿದೇಶಿಗರನ್ನು ಸೇರಿಸಿ, ಅವರಿಗೆ ಕಾನೂನುಬಾಹಿರವಾಗಿ ಆಶ್ರಯ ಹಾಗೂ ಉದ್ಯೋಗ ನೀಡಲಾಗುತ್ತಿದೆ ಎಂಬ ಮಾಹಿತಿ ವಿವಿಧ ಮೂಲಗಳಿಂದ ಲಭ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದು, ರಾಷ್ಟ್ರದ ಭದ್ರತೆಗೆ ಅಪಾಯ ಉಂಟುಮಾಡುವ ಸಾಧ್ಯತೆ ಇದೆ. ಅಕ್ರಮ ನುಸುಳುಕೋರರಿಗೆ ಆಶ್ರಯ ಮತ್ತು ಉದ್ಯೋಗ ನೀಡುವುದು ಅಕ್ಷಮ್ಯ ಅಪರಾಧವಾಗಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸಿ ಯಾವುದೇ ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಚಂದ್ರಮೋಹನ್, ಸುಕೇಶ್ ಕುಂದರ್, ಕಾಂಗ್ರೆಸ್ ಪಕ್ಷದ ನಾಯಕರಾದ ಮಹಾಬಲ ಕುಂದರ್, ಮೀನಾಕ್ಷಿ ಮಾಧವ ಬನ್ನಂಜೆ, ಮ್ಯಾಕ್ಸಿಮ್ ಡಿ’ಸೋಜಾ, ಹಸನ್ ಸಾಹೇಬ್, ಗಣೇಶ್ ನೆರ್ಗಿ, ನವೀನ್ ಶೆಟ್ಟಿ, ಲತಾ ಆನಂದ್ ಶೇರಿಗಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸದಾನಂದ್ ಕುಲಾಲ್, ಮೊಹಮ್ಮದ್, ಶರತ್ ಶೆಟ್ಟಿ, ದಯಾನಂದ್, ಜೋಸ್ಸಿ ಪಿಂಟೋ, ಮನೋಜ್ ಕರ್ಕೇರ, ಸತೀಶ್ ಪುತ್ರನ್, ಹಮ್ಮದ್, ಕಿಶೋರ್, ಸಂಜಯ್ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.



