ಉಡುಪಿ: ತುರ್ತು ಪರಿಸ್ಥಿತಿ ವಿರೋಧಿಸಿ ರಚನೆಯಾದ ಜನತಾ ಪಕ್ಷದ ಸರ್ಕಾರ ಪತನಗೊಂಡ ಸಂದರ್ಭದಲ್ಲಿ ಅಂದಿನ ಜನಸಂದ ನಾಯಕರು ನಡೆದುಕೊಂಡ ರೀತಿ ಅದರ್ಶ ರಾಜಕಾರಣಕ್ಕೆ ಮಾದರಿಯಾಗಿದೆ ಎಂದು ಕಾರ್ಕಳ ಹಿರಿಯ ವಕೀಲ, ಬಿಜೆಪಿ ಮುಖಂಡ ಎಂ.ಕೆ. ವಿಜಯಕುಮಾರ್ ಹೇಳಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದರು.
ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಪ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.


