Wednesday, October 22, 2025

spot_img

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಗೆ ಭಾನುವಾರದಂದು ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

 ಜಿಲ್ಲೆಯಾದ್ಯಂತದ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ಉಡುಪಿ ಶಾಸಕ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿಯಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿರುವಂತೆ ಕ್ರೀಡಾಕೂಟಗಳಲ್ಲಿಯೂ ಕೂಡಾ ಹೆಸರು ಪಡೆಯುವಂತಾಗಬೇಕು. ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲ ವಿದ್ಯಾರ್ಥಿಗಳ ಬೆನ್ನಿಗಿದ್ದು, ಕ್ರೀಡಾಪಟುಗಳು ಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕು ಎಂದರು.

 ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಾಲೂಕುಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಜಿಲ್ಲೆಯ ಕ್ರೀಡಾಳುಗಳು ಉತ್ತಮಸಾಧನೆ ಮಾಡಿ ಯಶಸ್ವಿಯಾಗುವಂತೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಡಾ.ಜಿ.ಶಂಕರ್ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಕ ಡಾ.ರಾಮಚಂದ್ರ ಪಾಟ್ಕರ್ ಮತ್ತಿತರರು ಉಪಸ್ಥಿತರಿದ್ದರು. ಬಲೂನ್ ಹಾರಿಸುವ ಮೂಲಕ ಸಾಂಕೇತಿಕವಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles