Monday, March 2, 2026

spot_img

ಜಿಲ್ಲಾ ಮಟ್ಟದ  ಮ್ಯಾರಾಥಾನ್ ಹಾಗೂ ಸೈಕ್ಲಾಥಾನ್ 

ಉಡುಪಿ :  ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಹೆಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಪ್ರಯುಕ್ತ ಜಿಲ್ಲಾ ಮಟ್ಟದ  ಮ್ಯಾರಾಥಾನ್ ಹಾಗೂ ಸೈಕ್ಲಾಥಾನ್ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗದಲ್ಲಿ  ಶಾಸಕರಾದ ಯಶಪಾಲ್‌ ಸುವರ್ಣ, ಚಾಲನೆ ನೀಡಿದರು 

ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಉಡುಪಿ ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಶಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಸಂಯೋಜಿಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ,  ಮುಖ್ಯಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್‌,  ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಡಿ .ಹೆಚ್ಚು .ಓ ಡಾ ಬಸವರಾಜ ಹುಬ್ಬಳ್ಳಿ,   ಜಿಲ್ಲಾ ಸರ್ಜನ್ಡಾ ನಿತ್ಯಾನಂದ ನಾಯಕ. ಜಿ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿಗಳುಡಾ ಚಿದಾನಂದ ಸಂಜು  ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles