Thursday, October 23, 2025

spot_img

ಜಿಲ್ಲಾ ಶಿಕ್ಷಣ ತರಬೇತಿಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ ಉದ್ಘಾಟನೆ

ಉಡುಪಿ : ಡಾ. ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿದವರು, ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

 ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ  ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -10 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಸಾಹಿತಿ ಮತ್ತು ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ “ ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕಾರಂತರ ನೇರ ನಡೆ- ನುಡಿ ಹಾಗೂ ಅವರು ಬದುಕಿದ ರೀತಿ ಪ್ರತಿಯೊಬ್ಬರಿಗೂ ಆದರ್ಶ, ಅವರು ಎಲ್ಲಾ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿದವರು, ಇಂದಿನ ಯುವ ಪೀಳಿಗೆ ಅವರ ಮಾರ್ಗವನ್ನು ಪಾಲುಸುವಂತಗಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಭವ್ಯ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles