Saturday, June 28, 2025

spot_img

ಜಿ ಎಮ್ ನಲ್ಲಿ ಘಟಿಕೋತ್ಸವ ಸಮಾರಂಭ

ಬ್ರಹ್ಮಾವರ : ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು. ಕೆ.ಎಂ.ಸಿ ಮಣಿಪಾಲದ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರೋಫೆಸರ್ ಡಾ.ಮುರಳಿಧರ ಎಮ್. ಕುಲಕರ್ಣಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯು.ಕೆ.ಜಿ ಮಕ್ಕಳ ಶಿಕ್ಷಣದ ಮೊದಲ ಹಂತವಾಗಿದೆ. ನಿಮ್ಮ ಮಕ್ಕಳನ್ನು ಜಿ ಎಮ್ ಸಂಸ್ಥೆಗೆ ಸೇರಿಸಿ ಅವರ ಸಾಧನೆಗೆ ಉತ್ತಮ ಅಡಿಪಾಯ ಹಾಕಿದ್ದೀರಿ. ಮಕ್ಕಳಿಗೆ ಒತ್ತಡವನ್ನು ಹೇರದೆ ಅವರ ಆಸಕ್ತಿಯ ವಿಷಯವನ್ನು ಪ್ರೋತ್ಸಾಹಿಸಬೇಕು. ಅವರು ಸಮಾಜದ ಹಿತವನ್ನು ಕಾಯುವ ಕೆಲಸವನ್ನು ಮಾಡುವಂತೆ ಉತ್ತೇಜಿಸಬೇಕು. ಮಕ್ಕಳು ಹೆಚ್ಚಾಗಿ ನೋಡಿ ಕಲಿಯುವುದರಿಂದ ಶಿಕ್ಷಕರು ಮತ್ತು ಪೋಷಕರು ಮಗುವಿನಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಲು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರಬೇಕೆಂದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ ಮಕ್ಕಳಿಗೆ ತಮ್ಮ ಪೋಷಕರೇ ಆದರ್ಶ
ವ್ಯಕ್ತಿಗಳಾಗಿರುತ್ತಾರೆ. ಪಾಲಕರು ಮಕ್ಕಳೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಬೇಕು. ಅವರ ಕಲಿಕೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಬೇಕೆಂದರು. ಯು.ಕೆ.ಜಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles