ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪ್ರೇರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜಿ ರಾಮಚಂದ್ರ ಐತಾಳ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಶಾಲಾ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿ ಅದನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂಬ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪರಿಷತ್ ಸದಸ್ಯರಾದ ಶ್ರೀಮತಿ ಸುಪ್ರಿತಾ ಪುರಾಣಿಕ್, ಅಚ್ಯುತ್ತ ಪೂಜಾರಿ, ಶ್ರೀಮತಿ ಭಾಗೇಶ್ವರಿ ಮಯ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಹನಿಗವನ ರಚನೆ, ಕವನ ಪಠಣ, ಜ್ಞಾಪಕಶಕ್ತಿ ಪರೀಕ್ಷೆ ಹೀಗೆ ಅನೇಕ ಚಟುವಟಿಕೆಗಳನ್ನು ಆಯೋಜಿಸಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ವೈಯಕ್ತಿಕ ಕಲ್ಪನೆಗಳನ್ನು ಕನ್ನಡದಲ್ಲಿ ಸಮರ್ಥವಾಗಿ ಮಂಡಿಸಿದರು. ಹಲವರು ತಮ್ಮದೇ ಆದ ಕವನಗಳನ್ನು ರಚಿಸಿ ಸವಿನಯವಾಗಿ ಪಠಿಸಿದರು. ಉತ್ತಮ ಪ್ರತಿಭೆಯನ್ನು ತೋರ್ಪಡಿಸಿದ ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳು ಗೌರವಿಸಿದರು. ಜೊತೆಗೆ ಅಭಿನಯ ಗೀತೆಯನ್ನು ವಿದ್ಯಾರ್ಥಿಗಳ ಮೂಲಕ ಮಾಡಿಸಿದರು. ಕನ್ನಡ ಸಾಹಿತ್ಯದ ವಿವಿದ ಪ್ರಕಾರಗಳಾದ ಯಕ್ಷಗಾನ, ಜನಪದ ಗೀತೆ, ನಾಟಕ, ಏಕಪಾತ್ರ ಅಭಿನಯವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡುವುದರ ಮೂಲಕ ಮಕ್ಕಳಿಗೆ ಪ್ರಾತ್ಯಕ್ಷಿಕ ಅನುಭವವನ್ನು ನೀಡಿದರು. ಹಾಗೆಯೇ ಭಾಷೆಯ ಮೇಲಿನ ಒಲವು ಹೆಚ್ಚಾಗುವಂತಹ ಸAಗೀತದ ರಸದೌತಣವನ್ನು ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಕಲ್ಪಿಸಿದರು.


