Tuesday, May 26, 2026

spot_img

ಟೈಯರ್ ಸ್ಫೋಟದಿಂದ ಅಂಬಾಗಿಲು ಬಳಿ ಮೀನಿನ ಲಾರಿ ಪಲ್ಟಿ..

ಉಡುಪಿ : ಉಡುಪಿ ನಗರ ಸಮೀಪದ ಅಂಬಾಗಿಲು ಬಳಿ ಮೀನಿನ ಲಾರಿಯೊಂದು ಪಲ್ಟಿಯಾದ ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ನಡೆದಿದೆ. ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಮೀನಿನ ಲಾರಿಗೆ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಟೈಯರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ತಕ್ಷಣ ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು. ಲಾರಿ ಪಲ್ಟಿಯಾದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಗೊಂದಲ ಉಂಟಾದರೂ, ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles