Wednesday, March 4, 2026

spot_img

ಡಾ. ತಲ್ಲೂರು ಶಿವರಾಮ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆ..

ಉಡುಪಿ: ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.)ದ ಉಪಾಧ್ಯಕ್ಷರಾಗಿ ಉಡುಪಿಯ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಕಾರ್ಯಕಾರಿ ಸಭೆಯಲ್ಲಿ ಒಕ್ಕೊರಲಿನಿಂದ ಆಯ್ಕೆ ಮಾಡಲಾಗಿದೆ. ಅವರು ಪ್ರಸ್ತುತ ಉಡುಪಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

1954ರಲ್ಲಿ ಸ್ಥಾಪನೆಯಾದ ಕೆ.ಎಸ್.ಹೆಚ್.ಎ. ರಾಜ್ಯದ 30 ಜಿಲ್ಲೆಗಳ ಹೋಟೆಲ್ ಸಂಘಗಳನ್ನು ಒಳಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಪ್ರತಿನಿಧಿಸುತ್ತದೆ.

ಡಾ. ತಲ್ಲೂರು ಅವರ ಆಯ್ಕೆ ಕರಾವಳಿ ಭಾಗದಲ್ಲಿ ಹೋಟೆಲ್ ಉದ್ಯಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘ ಶುಭ ಹಾರೈಸಿದೆ. ಪ್ರಸ್ತುತ ಅವರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles