ಉಡುಪಿ : ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ವಾರ್ಷಿಕೋತ್ಸವದ ಅಂಗವಾಗಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ, ಮಣಿಪಾಲ ತಂತ್ರಜ್ಞಾನ ಸಂಸ್ಥೆಯ ಖ್ಯಾತ ಪರಿಸರವಾದಿ ಹಾಗೂ ಸಮಾಜಸೇವಕ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಶ್ರೀ ಶ್ರೀ ಬಿಕ್ಷು ಲಕ್ಷ್ಮಾನಂದ ಸ್ವಾಮೀಜಿ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಶ್ರೀ ಮದಡೆನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾಧ ಕೂಡ್ಲು, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಕಾರ್ಯದರ್ಶಿ ವಸಂತ್ ಕೆರೆಮನೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದೇ ವೇಳೆ ಸಂದ್ಯಾ ಬೇಕಲ್, ಪ್ರದೀಪಕುಮಾರ್ ಬೇಕಲ್, ಪಿ.ವಿ. ಪ್ರದೀಪ ಕುಮಾರ, ಶಾಂತಾ ಪುತ್ತೂರ, ಡಾ. ಸುರೇಶ ನೆಲಗುಳಿ, ಡಾ. ಗೋವಿಂದ ಕೊಳ್ಚಪೆ, ಡಾ. ತಮ್ಮನಗೌಡ್ರ, ಪತ್ರಕರ್ತ ಸಿ.ವಾಯ್. ಮೆಣಸಿನಕಾಯಿ, ಶಿಕ್ಷಕ ಸಂಘದ ಮುಖಂಡ ರಾಮಕೃಷ್ಣ ಶಿರೂರ ಹಾಗೂ ಇತರರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು. ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಡಾ. ಮದ್ದೋಡಿ ಅವರಿಗೆ ಈ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.



