ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟಪಡುಕೆರೆಯಲ್ಲಿ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಡಾ. ಸುನೀತ ವಿ ಅವರಿಗೆ ಕಾಲೇಜಿನ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗೀತಾನಂದ ಫೌಂಡೇಶನ್‌ನ ಪ್ರವರ್ತಕರಾದ ಆನಂದ್ ಸಿ. ಕುಂದರ್ ಅವರು ನಿವೃತ್ತಿಯಾಗುತ್ತಿರುವ ಡಾ. ಸುನೀತ ವಿ ಅವರ ಶೈಕ್ಷಣಿಕ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಮೇಶ್ ಆಚಾರ್, ಐಕ್ಯೂಎಸಿ ಸಂಚಾಲಕರಾದ ಡಾ. ಸುಬ್ರಮಣ್ಯ, ಸಿಬ್ಬಂದಿ ಕಾರ್ಯದರ್ಶಿ ಡಾ. ಶಂಕರ ನಾಯಕ್ ಬಿ., ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಬಿಲ್ಲವ ಹಾಗೂ ರಂಜಿತ್ ಕುಮಾರ್ ಬಾರಿಕೆರೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ಉಪನ್ಯಾಸಕಿ ಡಾ. ರಶ್ಮಿ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ ಸ್ವಾಗತಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಡಾ. ಸುನೀತ ವಿ ಅವರ ಶೈಕ್ಷಣಿಕ ಕೊಡುಗೆ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಹಾಗೂ ಸೇವಾ ಮನೋಭಾವವನ್ನು ಸ್ಮರಿಸಿ ಅಭಿನಂದಿಸಿದರು. ನಿವೃತ್ತಿ ಜೀವನ ಸುಖ, ಶಾಂತಿ ಹಾಗೂ ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.



