Saturday, August 8, 2026

spot_img

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪ್ರಮುಖ ಆರೋಪಿ ಶೂಟರ್ ರಾಜುಗೆ ಪೊಲೀಸರ ಗುಂಡೇಟು

ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎನ್ನಲಾದ ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಪೊಲೀಸರ ಗುಂಡೇಟಿಗೆ ಗಾಯಗೊಂಡಿರುವ ಘಟನೆ ಬೈಂದೂರು ತಾಲೂಕಿನ ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ.


ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ ನೇತೃತ್ವದ ಪೊಲೀಸ್ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು.


ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಅವರ ಬಲ ಕಾಲಿಗೆ ಗುಂಡೇಟು ತಗುಲಿದೆ.
ಕಾರ್ಯಾಚರಣೆ ವೇಳೆ ಎಸ್‌ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಆರೋಪಿ ರಾಜುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪೊಲೀಸರ ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.


ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶೂಟರ್ ರಾಜು ಸೇರಿದಂತೆ ಆರೋಪಿಗಳ ಹಿನ್ನೆಲೆ ಹಾಗೂ ಕೊಲೆಯ ಹಿಂದಿನ ಉದ್ದೇಶದ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles