Wednesday, March 4, 2026

spot_img

ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಮನವಿ

ಕುಂದಾಪುರ : ರಾಜ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ತಜ್ಞ ವೈದ್ಯರನ್ನು ಸ್ಥಳಾಂತರಿಸುತಿರುವುದು ಕಂಡುಬಂದಿದೆ ಹೀಗಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯದ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಇವರನ್ನು ಭೇಟಿ ಮಾಡಿ ಈ ವಿಷಯವಾಗಿ ಮಾತನಾಡಿದರು.

 ರಾಜ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ತಜ್ಞ ವೈದ್ಯರನ್ನು ಸ್ಥಳಾಂತರಿಸುತಿರುವುದು ಕಂಡುಬಂದಿದ್ದು ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಾದ ಬ್ರಹ್ಮಾವರ,ಕೋಟ, ಬೈಂದೂರು, ಆಸ್ಪತ್ರೆಗಳಲ್ಲಿನ ತಜ್ಞ ವೈದ್ಯರನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಿದಂತೆ ಶಾಸಕರು ಸಚಿವರ ಗಮನಕ್ಕೆ ತಂದರು.

ಗ್ರಾಮೀಣ ಭಾಗದ ಬಡ ಅನಾರೋಗ್ಯ ಪೀಡಿತರು ಹಾಗೂ ಮಕ್ಕಳು ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಭವನಕ್ಕೆ ಆಗಮಿಸುತ್ತಿದ್ದು ಸ್ಥಳೀಯವಾಗಿ ಯಾವುದೇ ಆಸ್ಪತ್ರೆಗಳು ಇಲ್ಲದಿರುವುದರಿಂದ  ಅವರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಸಚಿವರಿಗೆ ಮನವಿ ಪತ್ರ ನೀಡಿದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles