ಕುಂದಾಪುರ : ಪದವಿಪೂರ್ವ ಶಿಕ್ಷಣ ಇಲಾಖೆಯವರು ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ವಿದ್ಯಾರ್ಥಿಗಳಾದ ಮೌನೇಶ್, ಯೋಗೀಶ್, ಪ್ರಜ್ವನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.