Monday, March 2, 2026

spot_img

ತೆಂಗು ಬೆಳೆಗೆ ಹೊಸ ಕಾಯಕಲ್ಪ: ಜಿಲ್ಲೆ ದೇಶಕ್ಕೆ ಮಾದರಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕರ್ನಾಟಕ ಕರಾವಳಿಯ ಜನರ ಜೀವನಾಡಿಯಾದ ತೆಂಗು ಬೆಳೆಗೆ ಹೊಸ ಕಾಯಕಲ್ಪ ದೊರೆತು, ಉಡುಪಿ ಜಿಲ್ಲೆ ತಮಿಳುನಾಡು ಹಾಗೂ ಕೇರಳವನ್ನು ಹಿಂದಿಕ್ಕಿ ದೇಶಕ್ಕೇ ಮಾದರಿಯಾಗಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 ಅವರು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ತೆಂಗು ಅಭಿವೃದ್ದಿ ಮಂಡಳಿ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತೆಂಗು ಅಭಿವೃದ್ದಿ ಮಂಡಳಿಯ ಸ್ಥಾಪನಾ ದಿನಾಚರಣೆ ಹಾಗೂ ತೆಂಗು ಬೆಳೆ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತೆಂಗು ಕೃಷಿಕರ ಸಮಸ್ಯೆಗಳಿಗೆ ಪರಿಹಾರ, ತೆಂಗಿನ ಉತ್ಪನ್ನಗಳಿಗೆ ಬೃಹತ್ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಲಬೆರಕೆ ರಹಿತ ಗಾಣದ ಎಣ್ಣೆ, ನೀರಾ, ಎಳನೀರು, ಗೊಬ್ಬರ, ತೆಂಗಿನ ಗೆರಟೆ ಸೇರಿದಂತೆ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಇದ್ದು, ರೈತರು ಇದರ ಸದುಪಯೋಗ ಪಡೆಯಬೇಕು. ತೆಂಗು ಬೆಳೆ ಮೇಲೆ ಕೀಟ ಬಾಧೆ ಹೆಚ್ಚಿದ್ದು, ಇದಕ್ಕೆ ಪರಿಹಾರಕ್ಕಾಗಿ 791 ಕೋಟಿ ರೂ. ಅನುದಾನ ಅಗತ್ಯವಿದ್ದು ಕೇಂದ್ರ ಕೃಷಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿದರು. ಈ ಸಂದರ್ಭ ತೆಂಗು ಕೃಷಿಯಲ್ಲಿ ಸಾಧನೆ ಮಾಡಿದ ಐವರು ಕೃಷಿಕರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದಲ್ಲಿ ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಪೂಜಾರಿ, ಕೋಟೇಶ್ವರ ಗ್ರಾ.ಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ತೆಂಗು ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಶುಭ ನಾಗರಾಜನ್, ಕಾಸರಗೋಡು ಸಿ.ಪಿ.ಸಿ.ಆರ್.ಐ ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್, ತೆಂಗು ಅಭಿವೃದ್ದಿ ಮಂಡಳಿಯ ವಲಯ ನಿರ್ದೇಶಕಿ ರಶ್ಮಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ನವೀನ್ ಚಂದ್ರ ಜೈನ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಇಲಾಖೆಯ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ತೆಂಗು ಅಭಿವೃದ್ದಿ ಮಂಡಳಿಯ ಮುಖ್ಯ ತೆಂಗು ಅಭಿವೃದ್ದಿ ಅಧಿಕಾರಿ ಡಾ.ಹನುಮಂತ ಗೌಡ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ತೋಟಗಾರಿಕೆ ಇಲಾಖೆ ನಿರ್ದೇಶಕಿ ಕ್ಷಮಾ ಪಾಟೀಲ್ ಸ್ವಾಗತಿಸಿ, ಚಂದ್ರಶೇಖರ್ ಬೀಜಾಡಿ ನಿರೂಪಿಸಿ, ಉಕಾಸ ಅಧ್ಯಕ್ಷ ಸತ್ಯನಾರಾಯಣ ಉಡುಪ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles