Wednesday, April 29, 2026

spot_img

ತ್ರಾಸಿಯಲ್ಲಿ ಭೀಕರ ಬಸ್ ಅಪಘಾತ: ಇಬ್ಬರು ಸಾವು, ಓರ್ವ ಗಂಭೀರ..

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮುರುಡೇಶ್ವರದಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ಹಾಗೂ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್‌ನ ಅಡುಗೆ ಸಹಾಯಕ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ 47 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles