Tuesday, September 29, 2026

spot_img

ದಾರಿದೀಪ, ಹೈಮಾಸ್ಟ್ ದೀಪಗಳ ದುರಸ್ತಿ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಹದಗೆಟ್ಟಿರುವ ದಾರಿದೀಪ ಮತ್ತು ಹೈಮಾಸ್ಟ್ ದೀಪಗಳನ್ನು ದುರಸ್ತಿಪಡಿಸಿ ಸಾರ್ವಜನಿಕರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ನಗರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ದಾರಿದೀಪ ಹಾಗೂ ಹೈಮಾಸ್ಟ್ ದೀಪಗಳು ಕಾರ್ಯನಿರ್ವಹಿಸದೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಸಮಸ್ತ ನಾಗರಿಕರ ಪರವಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles