ಉಡುಪಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಕಳ, ಬ್ರಹ್ಮಾವರ ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಏಕಕಾಲದಲ್ಲಿ ನಡೆದ ಧಾಳಿ ವೇಳೆ ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಿಂದ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸಿಡಿಮದ್ದುಗಳನ್ನು ಸುರಕ್ಷಿತವಾಗಿ ಅಧಿಕೃತ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು, ನಂತರ ನಿಯಮಾನುಸಾರ ನಾಶಪಡಿಸಲಾಗಿದೆ. ಸದ್ಯ ಜಿಲ್ಲೆಯಲ್ಲಿ ಅಕ್ರಮ ಸಿಡಿಮದ್ದು ಸಂಗ್ರಹಣೆ ಮತ್ತು ಖರೀದಿ ಕುರಿತ ತನಿಖೆ ಮುಂದುವರಿದಿದೆ.
