Sunday, April 6, 2025

spot_img

ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 35 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ ಸಿ ದೇವಸ್ಥಾನಗಳ ವಿವರ: ಉಡುಪಿ ತಾಲೂಕಿನ ಉದ್ಯಾವರದ ದೇವಸ್ಥಾನಗಳಾದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಶಂಭುಕಲ್ಲು ವೀರಭದ್ರ ದೇವಸ್ಥಾನ, ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿ ಶಿವಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿಯ ಶ್ರೀ ಮಹಾವಿಷ್ಣು ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಕಾಪು ತಾಲೂಕು ಕಟಪಾಡಿ ಚೊಕ್ಕಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಟ್ಟುವಿನ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಕಾರ್ಕಳ ತಾಲೂಕು ಬೈಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಬೋಳ ಪಿಲಿಯೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಕುಂದಾಪುರ ತಾಲೂಕಿನ ಕೋಣಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಹಾರ್ದಳ್ಳಿ-ಮಂಡಳ್ಳಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಬೆಳಗೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಬಸ್ರೂರು ಶ್ರೀ ಓಂಕಾರೇಶ್ವರ ದೇವಸ್ಥಾನ, ಗುಲ್ವಾಡಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನ, ಸಿದ್ದಾಪುರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಹೊಸಂಗಡಿಯ ಶ್ರೀ ಹೊಳೆ ಶಂಕರನಾರಾಯಣ ದೇವಸ್ಥಾನ, ಇಡೂರು ಕುಂಜ್ಞಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ದೇವಲ್ಕುಂದ ಶ್ರೀ
ವಿಷ್ಣುಮೂರ್ತಿ ದೇವಸ್ಥಾನ. ಬೈಂದೂರು ತಾಲೂಕಿನ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ, ಬಿಜೂರು ಅರೆಕಲ್ಲು ಹಿರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ
ಹಾಗೂ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನ.
ಬ್ರಹ್ಮಾವರ ತಾಲೂಕಿನ ನೂಜಿಕೆರೆ ಶ್ರೀ ವಿನಾಯಕ ದೇವಸ್ಥಾನ, ಕೆಂಜೂರು ಶ್ರೀ ವೀರೇಶ್ವರ ದೇವಸ್ಥಾನ, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಚಾಂತಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹಲುವಳ್ಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ.ಹೆಬ್ರಿ ತಾಲೂಕಿನ ಶ್ರೀ ಪಾಂಡುಕಲ್ಲು (ಶಿವಪುರ) ಕೋಟೆನಾಥ ದೇವಸ್ಥಾನ ಹಾಗೂ ಚಾರಾದ ಶ್ರೀ ಮಹಿಷಮರ್ಧಿನೀ ದೇವಸ್ಥಾನ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles