Friday, May 9, 2025

spot_img

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ

ಉಡುಪಿ: ಸಹಕಾರ ಭಾರತಿಯಿಂದ ಕಳೆದ 18 ವರ್ಷ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಕೆಎಮ್‌ಎಫ್ ಪ್ರತಿನಿಧಿಯಾಗಿ ಸ್ಕಾಡ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನಿರಂತರ ಸ್ಥಾನಮಾನಗಳನ್ನು ಪಡೆದಿದ್ದ ಕೊಡವೂರು ರವಿರಾಜ್ ಹೆಗ್ಡೆಯವರು, ಚುನಾವಣಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯವರೆಗೆ ಸಹಕಾರ ಭಾರತಿಯೊಂದಿಗೆ ಇದ್ದು, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೊಸಬರಿಗೆ ಅವಕಾಶ ನೀಡಿ ಎಂದು ಹೇಳಿದ್ದ ಅವರು, ಇದೀಗ ಕಾಂಗ್ರೆಸ್ ಬೆಂಬಲಿತ ಕೂಟದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು.

ಅವರು ಉಡುಪಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡುತ್ತಾ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ. ಸಹಕಾರ ಭಾರತಿ ಬೆಂಬಲದೊಂದಿಗೆ ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಮೋಹನ್‌ದಾಸ್ ಅಡ್ಯಂತಾಯ(ಕಾರ್ಕಳ), ಭೋಜ ಪೂಜಾರಿ(ಹೆಬ್ರಿ), ಅಶೋಕ್ ರಾವ್(ಕಾಪು), ಹೆರ್ಗ ದಿನಕರ್ ಶೆಟ್ಟಿ(ಉಡುಪಿ), ಕಾಡೂರು ಸುರೇಶ್ ಶೆಟ್ಟಿ(ಕುಂದಾಪುರ), ಸುಬ್ಬಣ್ಣ ಶೆಟ್ಟಿ & ಟಿವಿ.ಪ್ರಾಣೇಶ್ ಯಡಿಯಾಳ್(ಬೈಂದೂರು), ಮಹಿಳಾ ಮೀಸಲಾತಿ ಕ್ಷೇತ್ರದಲ್ಲಿ ಶಾಂತಾ.ಎಸ್.ಭಟ್ (ಬ್ರಹ್ಮಾವರ) ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಬೆಂಬಲಿತವಾಗಿ ಕೊಡವೂರು ರವಿರಾಜ್ ಹೆಗ್ಡೆ, ಮಮತಾ ಶೆಟ್ಟಿ, ಸ್ವತಂತ್ರವಾಗಿ ಸ್ಪರ್ಧಿಸುವ ಕಮಲಾಕ್ಷ ಹೆಬ್ಬಾರ್ & ಸಿತ್ಮಾ ಆರ್ ಶೆಟ್ಟಿ ಸಹಕಾರ ಭಾರತಿಯ ವಿರುದ್ದ ಸ್ಪರ್ಧಿಸುತ್ತಿದ್ದಾರೆ. ಹೈನುಗಾರರು ಗೊಂದಲಕ್ಕೆ ಒಳಗಾಗದೇ, ಸಹಕಾರ ಭಾರತಿಯ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರ.ಕಾರ್ಯದರ್ಶಿ ನರಸಿಂಹ ಕಾಮತ್, ಹಾಲು ಪ್ರಕೋಷ್ಠ ರಾಜ್ಯ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ಜಿ.ಪ್ರ‌‌‌.ಕಾರ್ಯದರ್ಶಿ ಸುದೇಶ್ ನಾಯಕ್ ಉಪಸ್ಥಿತರಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles