Sunday, August 30, 2026

spot_img

ಧ್ಯಾನ್ ಚಂದ್ ಸಾಧನೆಯಿಂದ ಸ್ಫೂರ್ತಿ ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿ: ಯಶ್‌ಪಾಲ್ ಸುವರ್ಣ

ಉಡುಪಿ : ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಸಾಧನೆಯಿಂದ ಜಿಲ್ಲೆಯ ಯುವ ಕ್ರೀಡಾಪಟುಗಳು ಸ್ಫೂರ್ತಿ ಪಡೆದು ಒಲಿಂಪಿಕ್ಸ್‌ನಲ್ಲಿ ಸ್ವರ್ಣ ಪದಕ ಗೆದ್ದು, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಾಗಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಅವರ ಜೀವನ ಹಾಗೂ ಕ್ರೀಡಾ ಸಾಧನೆಗಳನ್ನು ಯುವ ಕ್ರೀಡಾಪಟುಗಳಿಗೆ ಪರಿಚಯಿಸುವುದು ಇದರ ಉದ್ದೇಶವಾಗಿದೆ. ಕ್ರೀಡೆಯಲ್ಲಿ ಶಿಸ್ತು, ನಿರಂತರ ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಯುವಜನರು ಉನ್ನತ ಸಾಧನೆ ಮಾಡಬೇಕು ಎಂದರು.ಈ ಸಂದರ್ಭದಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಅವರು ವಿದ್ಯಾರ್ಥಿಗಳಿಗೆ ಫಿಟ್ ಇಂಡಿಯಾ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಕಾರ್ಯದರ್ಶಿ ಗಣನಾಥ್ ಶೆಟ್ಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಅಧ್ಯಕ್ಷ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡೆಂಟ್ ರಾಜೇಶ್ ಕೆ.ಸಿ., ಹೋಂ ಗಾರ್ಡ್ ಇನ್ಸ್‌ಪೆಕ್ಟರ್ ಬಸವರಾಜ್, ರೆಡ್‌ಕ್ರಾಸ್ ಖಜಾಂಜಿ ಶಿವರಾಂ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀದೇವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ರೋವರ್ಸ್ ಮತ್ತು ರೇಂಜರ್ಸ್ ಸಂಚಾಲಕ ಮೆರ್ವಿನ್ ವಿಕ್ಟರ್ ಡಿಸೋಜಾ ವಂದಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಬಾಲರಾಜ್ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂಎಸಿ, ಕ್ರೀಡಾ ವಿಭಾಗ, ಎನ್‌ಎಸ್‌ಎಸ್, ಯುವ ರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್, ಹಳೆ ವಿದ್ಯಾರ್ಥಿ ಸಂಘ, ಲಯನ್ಸ್ ಕ್ಲಬ್ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಮತ್ತು ಕುಂದಾಪುರ ಹಾಗೂ ಗೃಹರಕ್ಷಕ ದಳ–ಪೌರರಕ್ಷಣಾ ದಳ ಉಡುಪಿ ಘಟಕಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles