Friday, September 11, 2026

spot_img

ನಕಲಿ ಆಧಾರ್‌ ಕಾರ್ಡ್‌ ಬಳಸಿ ನ್ಯಾಯಾಲಯದಲ್ಲಿ ಜಾಮೀನಿಗೆ ಯತ್ನ; ಇಬ್ಬರ ಬಂಧನ

ಉಡುಪಿ: ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿ ನ್ಯಾಯಾಲಯದಲ್ಲಿ ಜಾಮೀನುದಾರನಾಗಿ ಹಾಜರುಪಡಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆಗಸ್ಟ್‌ 13ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್‌ ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪ್ರಕರಣವೊಂದರಲ್ಲಿ ಆರೋಪಿ ನೋಮಾನ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ ಉಮ್ಮರ್ ಫಾರೂಕ್ ಬಂಟ್ವಾಳ ಎಂಬಾತನು ಮತ್ತೊಬ್ಬ ವ್ಯಕ್ತಿಯ ಆಧಾರ್‌ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ, ಹೆಸರು ಮತ್ತು ವಿಳಾಸವನ್ನು ಬದಲಾಯಿಸಿ ತನ್ನ ಸ್ವಂತ ಲಾಭಕ್ಕಾಗಿ ಬಳಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ನ್ಯಾಯಾಲಯಕ್ಕೆ ಹಾಗೂ ನೈಜ ದಾಖಲೆ ಹೊಂದಿರುವ ವ್ಯಕ್ತಿಗಳಿಗೆ ವಂಚನೆ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಈ ಸಂಬಂಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಗಾಗಿ ಉಡುಪಿ ನಗರ ಪೊಲೀಸ್‌ ಠಾಣೆ ಪೊಲೀಸ್‌ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ಪೊಲೀಸ್‌ ಉಪನಿರೀಕ್ಷಕ ರತ್ನಾಕರ ಕೆ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಕಾರ್ಯಾಚರಣೆ ನಡೆಸಿ ಉಮ್ಮರ್ ಫಾರೂಕ್ ಬಂಟ್ವಾಳ ಹಾಗೂ ನಿಶಾಂತ್ ಕುಮಾರ್, ಮಂಗಳೂರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಾರ್ಯಾಚರಣೆಯಲ್ಲಿ ಎಎಸ್ಐ ಲೋಕೇಶ್, ಹೆಡ್‌ ಕಾನ್‌ಸ್ಟೆಬಲ್‌ಗಳಾದ ಸಂತೋಷ್, ಜಗನ್ನಾಥ್ ನಾಯ್ಕ್, ಪೊಲೀಸ್‌ ಸಿಬ್ಬಂದಿಗಳಾದ ಆನಂದ್, ಆನಂದಯ್ಯ, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ, ಹೇಮಂತ್ ಸೇರಿದಂತೆ ಉಡುಪಿ ನಗರ ಠಾಣೆಯ ಸಿಬ್ಬಂದಿ ಸಹಕರಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles